ಮಂಗಳವಾರ, ಜೂನ್ 28, 2022
25 °C

ಮೆದುಳು ನಿಷ್ಕ್ರಿಯಗೊಂಡ ಮಹಿಳೆ ಅಂಗಾಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಏ.9ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೆದುಳು ನಿಷ್ಕ್ರಿಯ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಮಹಿಳೆಯ ಕುಟುಂಬದವರು ಅಂಗಾಂಗ ದಾನ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ (47) ಅವರು ಏ.9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯು ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ರಸ್ತೆಯ ವಿಭಜಕವನ್ನು ದಾಟಿ, ಮತ್ತೊಂದು ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರಿ ಮಾಡುತ್ತಿದ್ದ ಪ್ರೀತಿ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಶನಿವಾರ ವೈದ್ಯರು ಖಚಿತಪಡಿದ್ದಾರೆ. 

ಬಿಎಂಡಬ್ಲ್ಯು ಕಾರು ಚಾಲಕ ಮಣ್ಣಗುಡ್ಡೆಯ ಉದ್ಯಮಿ ಶ್ರವಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು