ಬುಧವಾರ, ಅಕ್ಟೋಬರ್ 21, 2020
26 °C

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹೆಸರಾಂತ ಕಲಾವಿದ ಮೋಹನ ಸೋನ(64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. 
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು.

ಮೋಹನ ಸೋನ ಅವರಿಗೆ ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರು ಇದ್ದಾರೆ.

ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮೋಹನ್ ಸೋನ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ರಂಗಭೂಮಿ ನಟರಾಗಿ, ನಿರ್ದೇಶಕರಾಗಿ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನಗಳನ್ನು ಮಾಡಿದ್ದರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು