ಕಡಬ (ಉಪ್ಪಿನಂಗಡಿ): ‘ಪರಿಸರ ಸಂರಕ್ಷಣೆ ಹೆಸರಿನಲ್ಲಿ ಕಾನೂನು ಅನುಷ್ಠಾನ ಮಾಡುವಾಗ ಜನರ ಅಭಿಪ್ರಾಯ ಸಂಗ್ರಹಿಸಿ, ಭಯದ ವಾತಾವರಣದಲ್ಲಿ ಬದುಕುವ ರೈತರಿಗೆ ರಾಜ್ಯ ಸರ್ಕಾರ ಧೈರ್ಯ ತುಂಬಬೇಕು. ಈ ಸಂಬಂಧ ನಡೆಯುವ ರೈತರ ಕಾನೂನು ಹೋರಾಟಕ್ಕೆ ಸದಾ ಬೆಂಬಲವಿದೆ’ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಡಬದಲ್ಲಿ ಮಂಗಳವಾರ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

ಪರಿಸರದೊಂದಿಗೆ ಅವಿನಾಭಾವ ಸಂಬಂಧ ಇಟ್ಟುಕೊಂಡು ಬದುಕುತ್ತಿರುವ ಮಲೆನಾಡಿನ ರೈತರಿಗೆ ಅಧಿಕಾರಿಗಳು ಪರಿಸರ ಸಂರಕ್ಷಣೆಯ ಬಗ್ಗೆ ಬುದ್ಧಿ ಹೇಳುವ ಅಗತ್ಯವಿಲ್ಲ. ರೈತರಿಂದ ಪರಿಸರ ಉಳಿದಿದೆ. ಪರಿಸರ ಸಂರಕ್ಷಣೆ ಹೆಸರಿನಲ್ಲಿ ಕಾನೂನು ಅನುಷ್ಠಾನ ಮಾಡುವಾಗ ಜನರ ಅಭಿಪ್ರಾಯವನ್ನು ಸಂಗ್ರಹಿಸಿ ರೈತರಿಗೆ ಧೈರ್ಯ ತುಂಬಬೇಕು. ರಾಜ್ಯದ ಕಂದಾಯ, ಅರಣ್ಯ ಇಲಾಖೆ ಸಚಿವರು ಜಿಲ್ಲೆಗೆ ಬಂದು ರೈತರು, ಅಧಿಕಾರಿಗಳ ಜೊತೆಯಾಗಿ ಸಂವಾದ ನಡೆಸಿ ಜಂಟಿ ಸರ್ವೆ ನಡೆಸಬೇಕು. ಬಳಿಕ ಜನರಿಗೆ ಅನ್ಯಾಯವಾಗದಂತೆ ಕಾನೂನು ರೂಪಿಸಿ ಅನುಷ್ಠಾನ ಮಾಡಬೇಕು ಎಂದರು.

ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಕಂದಾಯ ಮತ್ತು ಅರಣ್ಯ ಇಲಾಖೆಯ ಕಾನೂನು ಅನುಷ್ಠಾನದಿಂದ ಮಲೆನಾಡಿನ ರೈತರು ಭಯದಿಂದ ಜೀವನ ಸಾಗಿಸುವಂತಾಗಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಲಾಗುವುದು. ರಾಜ್ಯ ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ತಾರ್ಕಿಕ ಅಂತ್ಯ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದರು.

ಮಲೆನಾಡು ಹಿತರಕ್ಷಣಾ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ, ಕೃಷಿಕ ಕೃಷ್ಣ ಭಟ್, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಜಾಕೆ ಮಾಧವ ಗೌಡ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪ್ರಸನ್ನ ದರ್ಬೆ ಮಾತನಾಡಿದರು.
ಒಕ್ಕಲಿಗ ಸೇವಾ ಸಂಘದ ಸುರೇಶ್ ಗೌಡ, ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಅಲಿ, ಐತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹೀರೇಶ್ ಗೌಡ, ವಕೀಲ ಲೋಕೇಶ್ ಕೊಣಾಜೆ, ಮಲೆನಾಡು ಹಿತರಕ್ಷಣಾ ಸಮಿತಿಯ ಆಶೋಕ್ ಗೌಡ ಭಾಗವಹಿಸಿದ್ದರು.

ರಮಾನಂದ ಎಣ್ಣೆಮಜಲು ಸ್ವಾಗತಿಸಿ, ವಂದಿಸಿದರು. ದಾಮೋದರ ಗುಂಡ್ಯ ವಂದಿಸಿದರು. ವಿನಯ ನಿರೂಪಿಸಿದರು. ಸಭೆಯ ಬಳಿಕ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಮಲೆನಾಡು ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಅರಣ್ಯ ಇಲಾಖಾ ಅಧಿಕಾರಿ ವಿಮಲ್ ಬಾಬು ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.