ಬಂಟ್ವಾಳ: ಸಮಾಜದಲ್ಲಿ ಕೃಷಿಕರ ಅವಿರತ ದುಡಿಮೆಯಿಂದ ಸಮೃದ್ಧ ಸಮಾಜ ನಿರ್ಮಿಸಲು ಸಾಧ್ಯ. ಕೃಷಿ ಇಲಾಖೆ ಮೂಲಕ ಸರ್ಕಾರ ನೀಡುವ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಕೃಷಿಕ ಸಮಾಜದ ಅಗತ್ಯವಿದೆ ಎಂದು ಮುಖಂಡ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ಕೃಷಿಕ ಸಮಾಜದ ವತಿಯಿಂದ ಸೋಮವಾರ ನಡೆದ ‘ಕೃಷಿಕ ಸಮಾಜ ಭವನ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಕ ಸಮಾಜ ರಾಜ್ಯ ಸಮಿತಿ ಅಧ್ಯಕ್ಷ ಮಂಜುನಾಥ ಗೌಡ ಎಸ್.ಆರ್. ಮಾತನಾಡಿ, ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಮತ್ತಷ್ಟು ಅನುದಾನ ಅಥವಾ ಬಡ್ಡಿ ರಹಿತ ಸಾಲ ಒದಗಿಸುವ ಬಗ್ಗೆ ಪ್ರಯತ್ನಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವಿಜಯ ಕುಮಾರ್ ರೈ, ಉಪಾಧ್ಯಕ್ಷ ಚಂದ್ರ ಕೊಲ್ಚಾರ್ ಮಾತನಾಡಿದರು.

ಬೂಡ ಅಧ್ಯಕ್ಷ ಬೇಬಿ ಕುಂದರ್, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಪುರಸಭಾಧ್ಯಕ್ಷ ವಾಸು ಪೂಜಾರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಕೃಷಿ ಸಹಾಯಕ ನಿರ್ದೇಶಕಿ
ವೀಣಾ ಕೆ.ಆರ್., ತೋಟಗಾರಿಕೆ ಸಹಾಯಕ ನಿರ್ದೇಶಕ ಜೋ. ಪ್ರದೀಪ್ ಡಿಸೋಜ, ಪದಾಧಿಕಾರಿಗಳಾದ ಆಲ್ಬರ್ಟ್ ಮಿನೇಜಸ್, ರಮಾನಾಥ ವಿಟ್ಲ, ಗಣೇಶ ಶೆಟ್ಟಿ ಗೋಳ್ತಮಜಲು, ಬದ್ರುದ್ದೀನ್ ಮಂಚಿ, ರಮೇಶ ನೆಟ್ಲ, ರೆಹ್ಮತ್ಉಲ್ಲಾ, ದೇವದಾಸ ರೈ, ಎಸ್.ಎನ್.ಹೊಳ್ಳ, ಮಹಮ್ಮದ್ ನಂದರಬೆಟ್ಟು, ವಿಶ್ವನಾಥ ನಾಯ್ಕ್, ಮೋಹನ ಆಚಾರ್ಯ ಭಾಗವಹಿಸಿದ್ದರು.

ಕೃಷಿಕ ಸಮಾಜ ಅಧ್ಯಕ್ಷ ಎಂ.ಪದ್ಮರಾಜ್ ಬಲ್ಲಾಳ್ ಸ್ವಾಗತಿಸಿ, ಕಟ್ಟಡ ಸಮಿತಿ ಅಧ್ಯಕ್ಷ ಕೆ.ಪದ್ಮನಾಭ ರೈ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಉಮ್ಮರ್ ಮಂಚಿ ವಂದಿಸಿದರು. ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.