ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿಗೆ ಕೃಷಿಕರಿಂದ ತಕ್ಕ ಪಾಠ: ಚಾಮರಸ ಮಾಲಿಪಾಟೀಲ

Published 20 ಏಪ್ರಿಲ್ 2024, 4:56 IST
Last Updated 20 ಏಪ್ರಿಲ್ 2024, 4:56 IST
ಅಕ್ಷರ ಗಾತ್ರ

ಬಂಟ್ವಾಳ: ‘ದೇಶದಲ್ಲಿ 10 ವರ್ಷಗಳಲ್ಲಿ ಸುಳ್ಳು ಹೇಳಿಕೆ ಮತ್ತು ಭಾವನಾತ್ಮಕ ವಿಚಾರಗಳಿಂದ ಅಧಿಕಾರಕ್ಕೆ ಏರಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಕೃಷಿಕರು ಈ ಬಾರಿ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. 400 ಸ್ಥಾನ ಗಳಿಸುವ ಬದಲಾಗಿ 200 ಸ್ಥಾನಗಳಿಗೆ ಸಂಸದರ ಸ್ಥಾನ ಕುಸಿಯಲಿದೆ’ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದಲ್ಲಿ ರೈತರಿಂದ ಕಡಿಮೆ ಮೊತ್ತಕ್ಕೆ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಿದ ವಿಮಾನ ನಿಲ್ದಾಣ, ರೈಲು ಮಾರ್ಗ ಸೇರಿದಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಕಾರ್ಪೊರೇಟ್‌ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸ್ವಾಮಿನಾಥನ್ ಆರೋಗದ ವರದಿ ಜಾರಿ ಸೇರಿದಂತೆ ರೈತರ ಆದಾಯ ದುಪ್ಪಟ್ಟುಗೊಳಿಸುವ ಭರವಸೆ ಕಡೆಗಣಿಸಿದ ಪರಿಣಾಮ ಸಾಲ ಮನ್ನಾ ಮತ್ತು ಉದ್ಯೋಗ ಸೃಷ್ಟಿಯೂ ಇಲ್ಲದೆ ರೈತರ ಆತ್ಮಹತ್ಯೆ ಪ್ರಕರಣ ಮುಂದುವರಿದಿದೆ’ ಎಂದು ಅವರು ಆರೋಪಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯಕ್ಕೆ ಸಲ್ಲಬೇಕಿದ್ದ ಬರಪರಿಹಾರವನ್ನೂ ನೀಡದೆ ಜಿಎಸ್‌ಟಿ ಮೂಲಕ ಸಂಗ್ರಹಗೊಂಡ ತೆರಿಗೆಯ ಅನುದಾನ ವಿತರಣೆಯಲ್ಲೂ ತಾರತಮ್ಯ ಮಾಡುವ ಮೂಲಕ ರೈತ ವಿರೋಧಿ ಸರ್ಕಾರ ಎಂಬುದನ್ನು ನರೇಂದ್ರ ಮೋದಿ ಸಾಬೀತು ಮಾಡಿದ್ದಾರೆ’ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾ ಘಟಕದ ಅಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡಿಸ್‌, ಪ್ರೇಮನಾಥ ಶೆಟ್ಟಿ ಬಾಳ್ತಿಲ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT