ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯ ಉಸೇನ್ ಬೋಲ್ಟ್ ಶ್ರೀನಿವಾಸ ಸಾಧನೆಗೆ ಮೆಚ್ಚುಗೆ:ಒಲಿಂಪಿಕ್ ಓಟಕ್ಕೆ ತರಬೇತಿ

Last Updated 15 ಫೆಬ್ರುವರಿ 2020, 8:45 IST
ಅಕ್ಷರ ಗಾತ್ರ

ಮಂಗಳೂರು:ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ ಸಾಧನೆ ಕುರಿತ ಲೇಖನವನ್ನು ಟ್ವೀಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಮಹೀಂದ್ರಾ , ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ . ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕ ದಕ್ಕಬೇಕು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿತಿಸಿರುವ ಕ್ರೀಡಾ ಸಚಿವ‌ ಕಿರಣ್ ರಿಜಿಜು, ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತುದಾರರಿಂದ‌ ಶ್ರೀನಿವಾಸ ಗೌಡರಿಗೆ ತರಬೇತಿ‌ ನೀಡಲಾಗುವುದು ಎಂದು ತಿಳಿಸಿದ್ದಾರೆ. ಉಪ‌ಮುಖ್ಯಮಂತ್ರಿ‌‌ ಡಾ. ಅಶ್ವತ್ಥನಾರಾಯಣ ಕೂಡ‌ ಶ್ರೀನಿವಾಸ ಗೌಡರ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT