ಬುಧವಾರ, ಆಗಸ್ಟ್ 17, 2022
25 °C

ಸುಳ್ಯ: ಮಗನಿಂದ ಹಲ್ಲೆಗೆ ಒಳಗಾಗಿದ್ದ ತಂದೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ(ದಕ್ಷಿಣ ಕನ್ನಡ): ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ತಂದೆಯೊಬ್ಬರು ಆಸ್ಪತ್ರೆಯ‌ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡ ಆತ್ಮಹತ್ಯೆಗೆ ಶರಣಾದವರು. ಅಪ್ಪ-ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ 18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ವೇಳೆ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ. 

ಈ ವೇಳೆ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ ಗೌಡರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮಗನ ಇತ್ತೀಚಿನ ವರ್ತನೆಯಿಂದ ನೊಂದಿದ್ದ ಲಕ್ಷ್ಮಣ ಗೌಡ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಳ್ಯ ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು