ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆಯಲ್ಲಿ ಬುಧವಾರ ತಂದೆ ತನ್ನ ಮಗನನ್ನೇ ಕತ್ತಿಯಿಂದ ಕಡಿದು ಹತ್ಯೆ ಮಾಡಿದ ಬಳಿಕ, ತಾನು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆ ಸಮೀಪದ ಶ್ರೀರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ (58), ಪುತ್ರ ಸಾತ್ವಿಕ್(15)ನನ್ನು ಕತ್ತಿಯಿಂದ ಕಡಿದು, ಮನೆಯ ಪಕಾಸಿಗೆ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.

ಮದ್ಯಸೇವನೆಯ ಚಟ ಹೊಂದಿದ್ದ ಬಾಬು ನಾಯ್ಕ ಕೆಲ ದಿನಗಳಿಂದ ಮಗನೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದ. ಬುಧವಾರ ಮಧ್ಯಾಹ್ನವೂ ಮತ್ತೆ ಗಲಾಟೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಬು ನಾಯ್ಕನ ಪತ್ನಿ ಸುಗಂಧಿ ಫ್ಯಾಕ್ಟರಿಯೊಂದಕ್ಕೆ ಕೆಲಸಕ್ಕೆ ತೆರಳಿದ್ದರು. ಮಗನಿಗೆ ಫೋನ್ ಮಾಡಿದಾಗ ಆತ ಕರೆ ಸ್ವೀಕರಿಸದ ಕಾರಣ, ಸಂಶಯಗೊಂಡು ಅವರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಒಂದೆಡೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪುತ್ರ, ಇನ್ನೊಂದೆಡೆ ನೇಣು ಹಾಕಿಕೊಂಡ ಪತಿಯನ್ನು ಕಂಡು ಸುಗಂಧಿ ಬೆಚ್ಚಿ ಬಿದ್ದಿದ್ದಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ಎಸ್‌ಐ ಸೌಮ್ಯಾ ಜೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.