ಗುರುವಾರ , ಸೆಪ್ಟೆಂಬರ್ 29, 2022
28 °C

ಫಾಝಿಲ್ ಕೊಲೆ: ಒಬ್ಬ ಆರೋಪಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರತ್ಕಲ್: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಆರೋಪಿ ಬಂಟ್ವಾಳದ ಹರ್ಷಿತ್‌ಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

ಸೆ.7ರಂದು ಜಾಮೀನು ದೊರೆತಿದ್ದು, ಸೆ. 13ರಂದು ಹರ್ಷಿತ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಜುಲೈ 27ರ ರಾತ್ರಿ ಕಾರಿನಲ್ಲಿ ಬಂದ ತಂಡ ಫಾಝಿಲ್‌ ಅವರನ್ನು ಹತ್ಯೆ ಮಾಡಿತ್ತು. ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಆರೋಪಿಗಳನ್ನುತನ್ನ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗಿ ಉಳಿದು ಕೊಳ್ಳಲು ಆಶ್ರಯ ನೀಡಿದ್ದ ಆರೋಪಿದ ಮೇಲೆ ಎಂಟನೇ ಆರೋಪಿಯಾಗಿ ಹರ್ಷಿತ್‌ನನ್ನು ಪೊಲೀಸರು ಆಗಸ್ಟ್‌ 17ರಂದು ಬಂಧಿಸಿದ್ದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು