ಸೋಮವಾರ, ಮೇ 23, 2022
22 °C

ದಾಖಲೆಯ ಕಂಬಳ ಓಟಗಾರರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಂಬಳದ ದಾಖಲೆಯ ಓಟಗಾರರಾದ ಶ್ರೀನಿವಾಸ ಗೌಡ, ವಿಶ್ವನಾಥ ದೇವಾಡಿಗ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಕಂಬಳದ ಗದ್ದೆಯಲ್ಲಿ ಓಡುವ ಓಟಗಾರರಿಗೆ ಸೂಕ್ತ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅವರನ್ನು ಗೌರವಿಸಲಾಗುತ್ತಿದೆ. ಕಂಬಳ ಕ್ರೀಡೆಗೂ ಪ್ರೋತ್ಸಾಹ ನೀಡಲಾಗುತ್ತಿದ್ದು, ಅವರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ರಾಜೇಂದ್ರ ಕುಮಾರ್ ಹೇಳಿದರು.

ಕಂಬಳ ಗದ್ದೆಯಲ್ಲಿ ವಿಶ್ವನಾಥ ದೇವಾಡಿಗ (9.15 ಸೆ. ನೂರು ಮೀ.ಓಟ) ಮತ್ತು ಶ್ರೀನಿವಾಸ ದೇವಾಡಿಗ (9.31 ಸೆ.) ದಾಖಲೆ ನಿರ್ಮಿಸಿದ್ದಾರೆ. ರಾಜ್ಯ ಕ್ರೀಡಾ ಪ್ರಾಧಿಕಾರದ ಮೂಲಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕಂಬಳ ಕ್ರೀಡಾ ಅಕಾಡೆಮಿ ಅಧ್ಯಕ್ಷ ಗುಣಪಾಲ ಕದಂಬ ತಿಳಿಸಿದರು.

ಕಂಬಳ ಸಮಿತಿಯ ಸಂಘಟಕರಾದ ಬಿ.ಆರ್.ಶೆಟ್ಟಿ, ಸಂತೋಷ್ ಶೆಟ್ಟಿ ಬೋಳಗುತ್ತು, ವೆಂಕಟ ಪೂಜಾರಿ, ವಿಜಯ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್, ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು