ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷತೆ, ಪ್ರಾಮಾಣಿಕತೆ ಮುಖ್ಯ: ಎಂ.ಎನ್. ರಾಜೇಂದ್ರ ಕುಮಾರ್

Published 2 ಜುಲೈ 2024, 4:43 IST
Last Updated 2 ಜುಲೈ 2024, 4:43 IST
ಅಕ್ಷರ ಗಾತ್ರ

ಮಂಗಳೂರು: ಕಚೇರಿ ಸಿಬ್ಬಂದಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅದರಲ್ಲೂ ಬ್ಯಾಂಕ್ ಸಿಬ್ಬಂದಿ ಸೇವೆ ಇತರರಿಗೆ ಮಾದರಿಯಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪ ಮಹಾಪ್ರಬಂಧಕ ಜೆ. ಜೀವನ್ ಶೆಟ್ಟಿ, ಹಿರಿಯ ನಿರೀಕ್ಷಕಿ ಸಂಧ್ಯಾ ಹಾಗೂ ಸಿಬ್ಬಂದಿ ಕೊರಗಪ್ಪ ನಾಯ್ಕ್ ನಿವೃತ್ತರಾದ ಹಿನ್ನಲೆಯಲ್ಲಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿವೃತ್ತರಾದವರಿಗೆ ಶಾಲು, ಹಾರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಬ್ಯಾಂಕ್‌ ನೌಕರರ ಒಕ್ಕೂಟದಿಂದಲೂ ಈ ಮೂವರಿಗೆ ಅಭಿನಂದನೆ ಸಲ್ಲಿಸಲಾಯಿತು.

 ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೆಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ.ಜಯರಾಮ್ ರೈ , ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ ರೈ, ಹರಿಶ್ಚಂದ್ರ, ಕುಶಾಲಪ್ಪ ಗೌಡ ಹಾಗೂ ಅಧಿಕಾರಿಗಳು ಇದ್ದರು. ಉಪಮಹಾಪ್ರಬಂಧಕ ನಿತ್ಯಾನಂದ ಸೇರಿಗಾರ್ ಸ್ವಾಗತಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT