ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಪ್ರಸಾದ್, ಖಾದರ್‌ಗೆ ಅಭಿನಂದನೆ

Last Updated 17 ಮೇ 2022, 16:26 IST
ಅಕ್ಷರ ಗಾತ್ರ

ಮಂಗಳೂರು: ಅಭಿನಂದನಾ ಸಮಿತಿ ಆಶ್ರಯದಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರಿಗೆ ಮೇ 19ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪುರಭವನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಧರ ಹೆಗ್ಡೆ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕಾರ್ಯಕ್ರಮ ಉದ್ಘಾಟಿಸುವರು.ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಮತ್ತು ಮಾಜಿ ಸಚಿವ ಬಿ. ರಮಾನಾಥ ರೈ ಅಭಿನಂದನಾ ಭಾಷಣ ಮಾಡುವರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್, ಗಂಗಾಧರ ಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭಾಗವಹಿಸುವರು ಎಂದರು.

ಅಭಿನಂದನಾ ಸಮಿತಿಯ ಸಹ ಸಂಚಾಲಕ ಪುರುಷೋತ್ತಮ ಚಿತ್ರಾಪುರ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಪಾಲಿಕೆ ಸದಸ್ಯ ನವೀನ್ ಆರ್. ಡಿಸೋಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಶಾಹುಲ್ ಹಮೀದ್, ಸುಧೀರ್ ಟಿ.ಕೆ., ಶಬೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT