ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ

Published 8 ಮಾರ್ಚ್ 2024, 5:39 IST
Last Updated 8 ಮಾರ್ಚ್ 2024, 5:39 IST
ಅಕ್ಷರ ಗಾತ್ರ

ಉಜಿರೆ: ಜೀವನದಲ್ಲಿ ತ್ಯಾಗ ಮನೋಭಾವ, ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಆಯೋಜಿಸುತ್ತಿರುವ ರೂವಾರಿ ಹನುಮಂತಪ್ಪ ಸ್ವಾಮೀಜಿ ಅವರನ್ನು ಧರ್ಮಸ್ಥಳದಲ್ಲಿ ಶುಕ್ರವಾರ ಸನ್ಮಾನಿಸಿ ಅವರು ಮಾತನಾಡಿದರು.

ನಿರ್ದಿಷ್ಟ ಗುರಿ ಮತ್ತು ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ, ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ, ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು.

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ ಪಾದಯಾತ್ರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು
ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ ಪಾದಯಾತ್ರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು

ಪಾದಯಾತ್ರಿಗಳ ಕ್ಷೇತ್ರದರ್ಶನಕ್ಕೆ ನೆರವಾದ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT