ಇನ್ಸ್‌ಪೆಕ್ಟರ್‌ಗೆ ಅಂತಿಮ ನಮನ

7

ಇನ್ಸ್‌ಪೆಕ್ಟರ್‌ಗೆ ಅಂತಿಮ ನಮನ

Published:
Updated:

ಮಂಗಳೂರು: ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದ ಕರಾವಳಿ ಕಾವಲು ಪಡೆಯ ಹೆಜಮಾಡಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಹರೀಶ್ಚಂದ್ರ ಕೆ.ಪಿ. ಅವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕಚೇರಿ ಆವರಣದಲ್ಲಿ ಗುರುವಾರ ಬೆಳಿಗ್ಗೆ ಅಂತಿಮ ನಮನ ಸಲ್ಲಿಸಲಾಯಿತು.

ಡಿಸಿಪಿ ಉಮಾ ಪ್ರಶಾಂತ್‌, ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಕೆ.ರಾಮರಾವ್‌, ವಿವಿಧ ಠಾಣೆಗಳ ಇನ್‌ಸ್ಪೆಕ್ಟರ್‌ಗಳು, ಸಬ್‌ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಹಾಜರಿದ್ದು, ಮೃತ ಪೊಲೀಸ್ ಅಧಿಕಾರಿಗೆ ಅಂತಿಮ ಗೌರವ ಸಲ್ಲಿಸಿದರು. ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !