ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದವರಿಗೆ ದಂಡ

Last Updated 27 ಸೆಪ್ಟೆಂಬರ್ 2020, 2:54 IST
ಅಕ್ಷರ ಗಾತ್ರ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೇ ಇರುವವರಿಗೆ ಶನಿವಾರ ಬಿಸಿ ಮುಟ್ಟಿಸಿದ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ. ಶುಕ್ರವಾರ ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಯಮ ಉಲ್ಲಂಘಿಸಿದ ಜನರಿಂದ ಸುಮಾರು ₹5ಸಾವಿರ ದಂಡ ವಸೂಲಿ ಮಾಡಿದ್ದಾರೆ.

ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಮತ್ತು ಇತರ ಅಧಿಕಾರಿಗಳು ಟ್ರಾಫಿಕ್ ಪೊಲೀಸರೊಂದಿಗೆ, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದೇ ಓಡಾಡುತ್ತಿದ್ದ ವಾಹನ ಸವಾರರನ್ನು ತಡೆದು ದಂಡ ವಿಧಿಸಿದರು.

ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು, ಸ್ಯಾನಿಟೈಸರ್ ಬಳಕೆ, ಮಾಸ್ಕ್‌ ಧರಿಸುವುದು, ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT