ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು‌ | ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌– ವಿಎಚ್‌ಪಿ ಖಂಡನೆ

Published 27 ಡಿಸೆಂಬರ್ 2023, 7:56 IST
Last Updated 27 ಡಿಸೆಂಬರ್ 2023, 7:56 IST
ಅಕ್ಷರ ಗಾತ್ರ

ಮಂಗಳೂರು‌: ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಖಂಡಿಸಿದೆ.

‘ತ್ರಿವಳಿ ತಲಾಖ್‌ ನಿಷೇಧಿಸುವ ಮೂಲಕ ಕೇಂದ್ರ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ನೀಡಿದ್ದನ್ನು ಪ್ರಭಾಕರ ಭಟ್‌ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಉದಾಹರಣೆ. ಆರ್‌ಎಸ್‌ಎಸ್‌ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚಿನ ಮುಂದುವರಿದ ಭಾಗವಿದು. ಈ ಪ್ರಕರಣವನ್ನು ಹಿಂಪಡೆಯಬೇಕು’ ಎಂದು ವಿಎಚ್‌ಪಿಯ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ಹಿಂದೂ ನಾಯಕರನ್ನು ದಮನಿಸಲಾಗುತ್ತಿದೆ. ಪ್ರಭಾಕರ ಭಟ್  ವಿರುದ್ಧದ ಪ್ರಕರಣವನ್ನು ವಾಪಸು ಪಡೆಯಬೇಕು’ ಎಂದು ವಿಎಚ್‌ಪಿಯ ಜಿಲ್ಲಾ ಘಟಕದ ಅಧ್ಯಕ್ಷ  ಎಚ್.ಕೆ.ಪುರುಷೋತ್ತಮ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT