ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ಶಾಸಕ ಪೂಂಜ ವಿರುದ್ಧ ಪ್ರಕರಣ

Published 27 ಅಕ್ಟೋಬರ್ 2023, 19:40 IST
Last Updated 27 ಅಕ್ಟೋಬರ್ 2023, 19:40 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಫೇಸ್‌ಬುಕ್ ಪೇಜ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ’ ಎಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಚೇರಿಯಲ್ಲಿ ಕುಳಿತಿರುವ ಟೇಬಲ್ ಮುಂಭಾಗ ಹಾಗೂ
ಅವರ ಬೆಂಗಳೂರಿನ ಸಿ.ಎಂ.ನಿವಾಸದ ಗೇಟ್‌ನ ಮೇಲೆ ‘ಕಲೆಕ್ಷನ್ ಮಾಸ್ಟರ್ (ಸಿ.ಎಂ) ಆಫ್ ಕರ್ನಾಟಕ’ ಎಂದು ಬರೆದು ಹಸ್ತದ ಗುರುತನ್ನು ತಲೆ ಕೆಳಗೆ ಮಾಡಿ ಆ ಫೋಟೊಗಳನ್ನು ಫೇಸ್‌ಬುಕ್‌ ಪೇಜ್‌ನಲ್ಲಿ ಶಾಸಕ ಹರೀಶ್ ಪೂಂಜ ಪೋಸ್ಟ್ ಮಾಡಿದ್ದರು. ಸರ್ಕಾರವನ್ನು ಅವಮಾನಿಸುವ ಉದ್ದೇಶದಿಂದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಶೇಖರ್ ಕುಕ್ಕೇಡಿ ದೂರು
ನೀಡಿದ್ದರು.

ಬೆಳ್ತಂಗಡಿ ಠಾಣೆಯಲ್ಲಿ ಉದ್ದೇಶಪೂರ್ವಕವಾಗಿ ಅವಮಾನ, ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆ (ಐಪಿಸಿ 504, 505 (2)) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT