ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳಾದೇವಿ ಜಾತ್ರೆ: ಕೋಮು ಸಾಮರಸ್ಯ ಕದಡಿದ ಆರೋಪ-ಶರಣ್‌ ಪಂಪ್‌ವೆಲ್‌ ವಿರುದ್ಧ FIR

Published 18 ಅಕ್ಟೋಬರ್ 2023, 15:24 IST
Last Updated 18 ಅಕ್ಟೋಬರ್ 2023, 15:24 IST
ಅಕ್ಷರ ಗಾತ್ರ

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಜಾತ್ರಾ ಮಳಿಗೆಗಳಲ್ಲಿ ಕೇಸರಿ ಧ್ವಜವನ್ನು ಕಟ್ಟಿರುವ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹಾಗೂ ಇತರರ ವಿರುದ್ಧ ದಕ್ಷಿಣ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

‘ಶರಣ್ ಪಂಪ್‌ವೆಲ್‌ ತನ್ನ ಬೆಂಬಲಿಗರೊಂದಿಗೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿರುವ ಹಿಂದೂ ವ್ಯಕ್ತಿಗಳ ಮಾರಾಟ ಮಳಿಗೆಗಳ ಮೇಲೆ ಕೇಸರಿ ಧ್ವಜವನ್ನು ಕಟ್ಟಿದ್ದು, ಎಲ್ಲಾ ಹಿಂದೂಗಳೂ ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ಸಮುದಾಯದ ವ್ಯಾಪರಾಸ್ಥರು ಹೊಂದಿರುವ ಅಂಗಳಲ್ಲಿ ಮಾತ್ರ ಪಡೆದುಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ. ತನ್ಮೂಲಕ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿ.ಎಸ್.ಐ ಮನೋಹರ್ ಪ್ರಸಾದ್ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಭಾರತ…

[8:43 pm, 18/10/2023] Praveen Padigar: ಶರಣ್ ಪಂಪುವೆಲ್ ವಿರುದ್ಧ ಎಫ್‌ಐಆರ್‌ಗೆ ಖಂಡನೆ

ತಕ್ಕ ಉತ್ತರ ನೀಡುತ್ತೇವೆ: ಬಜರಂಗದಳ ಎಚ್ಚರಿಕೆ

ಪ್ರಜಾವಾಣಿ ವಾರ್ತೆ

ಮಂಗಳೂರು: ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದನ್ನು ಬಜರಂಗದಳ ಖಂಡಿಸಿದೆ.

‘ಹಿಂದೂ ಸಂಘಟನೆಯ ನಾಯಕರನ್ನು ಧಮನಿಸಲು ಪ್ರಯತ್ನಿಸಿದರೆ, ತಕ್ಕ ಉತ್ತರ ಕೊಡಲಾಗುವುದು’ ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

‘ಮುಸ್ಲಿಮರ ಓಲೈಕೆ ಸಲುವಾಗಿ ಶರಣ್‌ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ಬಜರಂಗದಳ ಬಲವಾಗಿ ಖಂಡಿಸುತ್ತದೆ’ ಎಂದು ಬಜರಂಗದಳದ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಧಾರ್ಮಿಕ ದತ್ತಿಇಲಾಖೆಯ ನಿಯಮಗಳ ಪ್ರಕಾರ ದೇವಸ್ಥಾನದ ವಠಾರ ಮತ್ತು ರಥಬೀದಿಯಲ್ಲಿ ಹಿಂದುಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶವಿಲ್ಲ. ಹಾಗಾಗಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಹಿಂದೂ ವ್ಯಾಪಾರಿಗಳ ಬೆಂಬಲಕ್ಕೆ ನಿಂತ ಶರಣ್‌ ಪಂಪ್‌ವೆಲ್‌ ವಿರುದ್ಧ ಹಾಕಿರುವ ಸುಳ್ಳು ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT