ಸೋಮವಾರ, ಜನವರಿ 25, 2021
19 °C

ಮಂಗಳೂರು: ಕೈಗಾರಿಕಾ ಘಟಕದಲ್ಲಿ ಬೆಂಕಿ ಅನಾಹುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಹೊರವಲಯದಲ್ಲಿರುವ ಬೈಕಂಪಾಡಿ ಕೈಗಾರಿಕಾ ವಲಯದ ಲೆಮಿನಾ ಬಿಡಿ ಉಪಕರಣಗಳ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಅನಾಹುತ ಸಂಭವಿಸಿದ್ದು, ಕೋಟ್ಯಂತರ ಹಾನಿಯಾಗಿದೆ.

ಘಟಕದಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಕಡಿತಗೊಂಡ ವೇಳೆ ಘಟನೆ ನಡೆದಿದೆ. ಆಯಿಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಮೂರು ವಾಹನಗಳು, ಎಂಸಿಎಫ್ ಹಾಗೂ ಎಂಆರ್‌ಪಿಎಲ್‌ನ ತಲಾ ಒಂದೊಂದು ವಾಹನಗಳು ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸಂಸ್ಥೆಗೆ ಭಾರೀ ನಷ್ಟವಾಗಿದೆ. ಹಾನಿಯಾದ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತಿದೆ. ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ತಹಬದಿಗೆ ಬಂದಿತು ಎಂದು ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು