ಬುಧವಾರ, ಜನವರಿ 27, 2021
16 °C

ಮಂಗಳೂರು: ಮಾಂಸದ ಅಂಗಡಿಗಳಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಮಾಂಸದ  ಅಂಗಡಿಗಳಿಗೆ ಬೆಂಕಿ ಬಿದ್ದಿದ್ದು, ವರ್ತಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿದ್ದ ಉಳ್ಳಾಲದ ಬಜರಂಗದಳ- ವಿಹಿಂಪ, ಅವುಗಳ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು.

ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು