ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

Last Updated 7 ಏಪ್ರಿಲ್ 2021, 13:06 IST
ಅಕ್ಷರ ಗಾತ್ರ

ಮಂಗಳೂರು: ನೀರಿನ ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ನಗರದ ಟಿಎಂಎ ಪೈ ಹಾಲ್ ಬಳಿ ಇರುವ ಹೊಂಡದಲ್ಲಿ ಪಾರಿವಾಳ ಬಿದ್ದಿತ್ತು. ಈ ಬಗ್ಗೆ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ಮಾಹಿತಿ ನೀಡಿದ್ದರು.

ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಪಾರಿವಾಳವನ್ನು ರಕ್ಷಿಸಿದ್ದಾರೆ. ಅದಕ್ಕೆ ಆರೈಕೆ ಮಾಡಿ, ಮತ್ತೆ ಹಾರಿ ಬಿಟ್ಟಿದ್ದಾರೆ.ಅಗ್ನಿಶಾಮಕ ದಳದವರ ಕಾರ್ಯಕ್ಕೆ ಸಾರ್ವಜನಿಕರು ‌ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT