ಭಾನುವಾರ, ನವೆಂಬರ್ 29, 2020
25 °C

ಫಳ್ನೀರ್‌ನಲ್ಲಿ ಗುಂಡಿನ ದಾಳಿ: ನಾಲ್ವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಫಳ್ನೀರ್‌ನಲ್ಲಿ ಶುಕ್ರವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ನಾಲ್ವರ ಪೈಕಿ ಇಬ್ಬರನ್ನು ನಗರ ಖಾಸಗಿ ಆಸ್ಪತ್ರೆಗೆ, ಇನ್ನುಳಿದ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಕೊನೆಗೆ ಗುಂಡು ಹಾರಿಸುವ ಮಟ್ಟಕ್ಕೆ ಹೋಗಿದೆ ಎನ್ನಲಾಗಿದೆ. ಎರಡೂ ಕಡೆಯಿಂದಲೂ ಗುಂಡು ಹಾರಿಸಲಾಗಿದೆ. ಏರ್ ಪಿಸ್ತೂಲ್‌ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.