ಬುಧವಾರ, ಜುಲೈ 15, 2020
22 °C

ಫಲ್ಗುಣಿ ನದಿಗೆ ವಿಷ; ಮೀನುಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ತಾಲ್ಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಬಳಿ ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಗುರುವಾರದ ರಾತ್ರಿ ಹೊತ್ತಿನಲ್ಲಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದೆ.

ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದಾರೆ. ಪ್ರಾಣಿ, ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಸತ್ತು ಬಿದ್ದಿರುವ ವಿಷಯುಕ್ತ ಮೀನುಗಳನ್ನು ಕೆಲವು ಹಕ್ಕಿಗಳು ತಿನ್ನುತ್ತಿದ್ದು, ಅವುಗಳೂ ಕೂಡ ಸಾಯುವ ಸಂಶಯ ವ್ಯಕ್ತವಾಗುತ್ತಿದೆ.

ನದಿಗೆ ವಿಷ ಹಾಕಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಕೆಲಸ ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಒಂದು ವೇಳೆ ಸರಿಯಾದ ಶಿಕ್ಷೆ ಆಗದೇ ಇದ್ದಲ್ಲಿ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ.

ಒಂದು ತಂಡದ ಮೇಲೆ ಸಂಶಯ ವ್ಯಕ್ತಪಡಿಸಿರುವ ಸ್ಥಳೀಯರು, ಆ ತಂಡವನ್ನು ಸರಿಯಾಗಿ ವಿಚಾರಿಸಿದರೆ ಸತ್ಯ ಹೊರಬರಬಹುದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು