ಮಂಗಳೂರು: ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪೂರಕವಾಗಿ, ಒಳನಾಡಿನಲ್ಲಿ ಇನ್ನೊಂದು ಮೀನುಗಾರಿಕಾ ಕಾಲೇಜು ಸ್ಥಾಪನೆಯಾಗಬೇಕು ಜೊತೆಗೆ ಹೆಚ್ಚುವರಿಯಾಗಿ ನಾಲ್ಕು ಸಂಶೋಧನೆ ಮತ್ತು ಮಾಹಿತಿ ಕೇಂದ್ರಗಳು ಪ್ರಾರಂಭವಾಗಬೇಕು ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ.ವೀರಣ್ಣ ಅಭಿಪ್ರಾಯಪಟ್ಟರು.

ಎಕ್ಕೂರಿನ ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ ‘ಸುಸ್ಥಿರ ಮೀನುಗಾರಿಕೆಯಲ್ಲಿ ಅವಕಾಶಗಳು’ ಕುರಿತ ಕಾರ್ಯಾಗಾರ ಹಾಗೂ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮತ್ಸ್ಯಮೇಳದಲ್ಲಿ ಮೀನುಗಾರಿಕೆ ವಿವಿ ಪ್ರಾರಂಭಿಸಲು ಸಿದ್ಧ ಇರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಇನ್ನೊಂದು ಕಾಲೇಜು ಸ್ಥಾಪನೆ ಸಂಬಂಧ ಈ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸದ್ಯ, ರಾಜ್ಯದಲ್ಲಿ ಮಂಗಳೂರಿನಲ್ಲಿ ಮಾತ್ರ ಮೀನುಗಾರಿಕಾ ಕಾಲೇಜು ಇದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ವಿವಿ ಸ್ಥಾಪನೆಗೆ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳು ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಇನ್ನೊಂದು ಮೀನುಗಾರಿಕಾ ಕಾಲೇಜು, ಪ್ರಸ್ತುತ ಇರುವ ನಾಲ್ಕು ಸಂಶೋಧನೆ ಮತ್ತು ಮಾಹಿತಿ ಕೇಂದ್ರಗಳ ಜೊತೆಗೆ ಇನ್ನೂ ನಾಲ್ಕು ಹೆಚ್ಚುವರಿ ಕೇಂದ್ರಗಳು ಪ್ರಾರಂಭ ಆಗಬೇಕಾಗಿದೆ. ಮಂಗಳೂರು ಮೀನುಗಾರಿಕಾ ಕಾಲೇಜಿನಲ್ಲಿ ಪ್ರಸ್ತುತ 65 ವಿದ್ಯಾರ್ಥಿಗಳು ಇದ್ದು, ಇದು 100ಕ್ಕೆ ಹೆಚ್ಚಳ ಆಗಬೇಕಾಗಿದೆ ಎಂದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಂಗಳೂರು ಮೀನುಗಾರಿಕಾ ಕಾಲೇಜಿನಲ್ಲಿ ಒಟ್ಟು ₹7.9 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಹಾಗೂ ವಿಸ್ತರಣಾ ಘಟಕಗಳ ಕಾಮಗಾರಿ ನಡೆಯುತ್ತಿದ್ದು, ಮೊದಲ ಹಂತದ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ. ಅಕ್ವೇರಿಯಂ ಗ್ಯಾಲರಿ, ಮೀನುಮರಿ ಉತ್ಪಾದನೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಶೋಧನೆಗೆ ಪೂರಕವಾಗುವ ಸೌಲಭ್ಯಗಳು ಎರಡನೇ ಹಂತದಲ್ಲಿ ನಡೆಯಲಿವೆ ಎಂದು ಹೇಳಿದರು.

ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೊರತೆ ಇದ್ದು, ಒಟ್ಟು ಮಂಜೂರು ಇರುವ 38 ಹುದ್ದೆಗಳಲ್ಲಿ 20 ಮಂದಿ ಕಾಯಂ ಪ್ರಾಧ್ಯಾಪಕರು ಇದ್ದಾರೆ. ಖಾಲಿ ಹುದ್ದೆ ನೇಮಕಾತಿ ಸಂಬಂಧ ಮಾರ್ಚ್ ಒಳಗೆ ನೋಟಿಫಿಕೇಷನ್ ಮಾಡಲಾಗುವುದು ಎಂದು ಹೇಳಿದರು.

ಕರ್ನಾಟಕ ಮೀನುಗಾರಿಕಾ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕಲ್ಲೇರ್ ಮಾತನಾಡಿ, ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೆ ₹5 ಕೋಟಿ ಅನುದಾನವನ್ನು ಇಲಾಖೆ ನೀಡಿದೆ. ಮಹಿಳಾ ಹಾಸ್ಟೆಲ್, ಕೇಂದ್ರ ಪ್ರಯೋಗಾಲಯ ಉಪಕರಣಕ್ಕೆ ಈ ಅನುದಾನ ಬಳಕೆಯಾಗಲಿದೆ ಎಂದರು.

ಮುಕ್ಕ ಶ್ರೀನಿವಾಸ ಕಾಲೇಜಿನ ಕುಲಪತಿ ಕೆ. ಸತ್ಯನಾರಾಯಣ ರೆಡ್ಡಿ, ಗೋವಾ ಸರ್ಕಾರದ ಮೀನುಗಾರಿಕಾ ಇಲಾಖೆಯ ನಿರ್ದೇಶಕಿ ಶರ್ಮಿಳಾ ಮೊಂತೆರೊ, ಮಂಗಳೂರು ಮೀನುಗಾರಿಕಾ ಕಾಲೇಜಿನ ಡೀನ್ ಎಚ್.ಎನ್. ಆಂಜನೇಯಪ್ಪ, ಬೆಂಗಳೂರು ಭುವಿ ಎಂಟರ್ಪ್ರೈಸಸ್ನ ಜಿ.ಎಸ್. ಗೋವಿಂದರಾಜು ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಆರ್. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಸ್ವಾಗತಿಸಿದರು. ವಿಜಯ ಕುಮಾರ್, ದೀಪಾಂಜಲಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.