ಬುಧವಾರ, ಜುಲೈ 6, 2022
23 °C

ಕ್ರೇನ್‌ಗೆ ಮೀನುಗಾರನನ್ನು ತಲೆಕೆಳಗಾಗಿ ಕಟ್ಟಿ ಹಿಂಸೆ, ಕೊಲೆಯತ್ನ‌ ಕೇಸ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಹಳೆಯ ಬಂದರು‌ ದಕ್ಕೆಯಲ್ಲಿ ಮೀನುಗಾರನನ್ನು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ್ದಾರೆ.  

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೇಪಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಮಾಹಿತಿ ತಿಳಿಸಿದೆ. 

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು, ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್.‌ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು