ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಗವೀರಪಟ್ಟಣ: ಮೀನುಗಾರಿಕೆ ಬಲೆಗೆ ಹಾನಿ

Published 30 ಮೇ 2024, 15:45 IST
Last Updated 30 ಮೇ 2024, 15:45 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ–ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ದೊಡ್ಡ ಅಲೆಗಳು ದಡಕ್ಕಪ್ಪಳಿಸುತ್ತಿವೆ. ಮೊಗವೀರಪಟ್ಟಣದಲ್ಲಿ ಮೀನುಗಾರಿಕೆಗೆ ಹಾಕಿದ್ದ ಬಲೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯ ಕಲ್ಲಿಗೆ ಸಿಲುಕಿ ಹಾನಿಯಾಗಿದೆ.

ಸ್ಥಳೀಯ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಕೆಲವು ದೋಣಿಗಳು ಸಮುದ್ರದ ಅಲೆಗಳ ಕಾರಣದಿಂದ ದಡಕ್ಕೆ ತಲುಪಲು ಅಲೆ ಕಡಿಮೆಯಾಗುವವರೆಗೆ ಕಾಯಬೇಕಾಯಿತು. ಮೊಗವೀರಪಟ್ಣದಲ್ಲಿ ಅಶ್ವಿನ್ ಅವರು ಸಮುದ್ರದಲ್ಲಿ ಮೀನಿಗಾಗಿ ಬೀಸಿದ್ದ ಬಲೆ ಸಮುದ್ರದ ಅಲೆಗೆ ಸಿಲುಕಿ ದಡಕ್ಕೆ ಬಂದಿದ್ದು, ಸುಮಾರು ₹ 10 ಸಾವಿರ ನಷ್ಟವಾಗಿದೆ.

ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ–ಮಳೆಗೆ ಉಳ್ಳಾಲದಲ್ಲಿ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು ದೊಡ್ಡ ಅಲೆಗಳು ದಡಕ್ಕಪ್ಪಳಿಸುತ್ತಿವೆ
ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ–ಮಳೆಗೆ ಉಳ್ಳಾಲದಲ್ಲಿ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು ದೊಡ್ಡ ಅಲೆಗಳು ದಡಕ್ಕಪ್ಪಳಿಸುತ್ತಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT