ಶನಿವಾರ, ಮೇ 15, 2021
28 °C

ಮಂಗಳೂರು: ಮೀನುಗಾರಿಕಾ ದೋಣಿ ದುರಂತದಲ್ಲಿ ಮೂವರ ಸಾವು, 9 ಮಂದಿ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸುರತ್ಕಲ್ ಲೈಟ್ ಹೌಸ್‌ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ನಡೆದ ಬೋಟ್ ಅಪಘಾತದಲ್ಲಿ ಮೂವರು ಮೀನು
ಗಾರರು ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ 9 ಜನರಿಗಾಗಿ ಹುಡುಕಾಟ ಮುಂದುವರಿದಿದೆ.

ಮೃತರ ಪೈಕಿ ಮಾಣಕ್ಯದಾಸ್ ಮತ್ತು ಅಲೆಗ್ಸಾಂಡರ್ ಎಂಬುವವರ ಗುರುತು ಪತ್ತೆಯಾಗಿದ್ದು, ಇನ್ನೊಬ್ಬರ ಹೆಸರು ತಿಳಿದಿಲ್ಲ. ಬೋಟ್‌ನಲ್ಲಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ಕಾರ್ಮಿಕರಿದ್ದರು.

ಏ.11ರಂದು ಬೆಳಿಗ್ಗೆ 10 ಗಂಟೆಗೆ ಕೇರಳದ ಬೇಪೂರ್‌ನಿಂದ ಹೊರಟ ಮೀನುಗಾರಿಕೆಯ ಈ ಬೋಟ್, ಸೋಮವಾರ ತಡರಾತ್ರಿ 2 ಗಂಟೆಗೆ ಸಿಂಗಪುರದ ಎಪಿಎಲ್‌ ಲೇ ಹ್ಯಾವ್ರೆ ಎನ್ನುವ ಹಡಗಿಗೆ ಡಿಕ್ಕಿ ಹೊಡೆದಿತ್ತು. ಸಮೀಪದಲ್ಲೇ ಇದ್ದ ಇನ್ನೊಂದು ಹಡಗಿನ ಸಿಬ್ಬಂದಿಯಿಂದ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದ್ದರು. ಉಳಿದ 9 ಜನರಿಗಾಗಿ ಶೋಧ ಮುಂದುವರಿಸಲಾಗಿದೆ. ಭಾರತೀಯ ನೌಕಾಪಡೆಯ ಹಡಗು ಹಾಗೂ ಮುಳುಗು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಿಸಿರುವ ಪಶ್ಚಿಮ ಬಂಗಾಳದ ಸುನಿಲ್ ದಾಸ್, ತಮಿಳುನಾಡಿನ ವೆಲು ಮುರುಗನ್ ರಾಮಲಿಂಗನ್‌ ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಭಾರತೀಯ ಕೋಸ್ಟ್‌ ಗಾರ್ಡ್‌‌ ಟ್ವಿಟ್ಟರ್‌‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು