ಮಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿರುವ ಆ್ಯಂಟಿ ಡ್ರಗ್ ಸೆಲ್ಗಳು ಕಾರ್ಯರೂಪಕ್ಕೆ ಬಂದು ಸಂಚಲನ ಮೂಡಿಸಬೇಕು. ಯಾವುದೇ ಕಾರಣಕ್ಕೂ ಕಾಲೇಜು ಆವರಣದಲ್ಲಿ ಡ್ರಗ್ಸ್ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಸೂಚನೆ ನೀಡಿದರು.

ಶುಕ್ರವಾರ ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ‘ಫಿಟ್ ಇಂಡಿಯಾ’ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಅವರು ಆರೋಗ್ಯಪೂರ್ಣವಾಗಿದ್ದಲ್ಲಿ ದೇಶದ ಸುಧಾರಣೆಯಲ್ಲಿ ಬದಲಾವಣೆ ಮಾಡುವ ಶಕ್ತಿ ಹೊಂದಿದ್ದಾರೆ. ದುಶ್ಚಟಕ್ಕೆ ಬಲಿಯಾಗದೇ ಯುವಕರು ಆರೋಗ್ಯವಾಗಿರಬೇಕು ಎಂದು ಹೇಳಿದರು.

ಎನ್ಎಸ್ಎಸ್ ಅಧಿಕಾರಿ ಗಣನಾಥ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ವಿಶ್ವವಿದ್ಯಾಲಯ ಕಾಲೇಜು ಪ್ರಾಂಶುಪಾಲ ಡಾ. ಉದಯಕುಮಾರ್, ರಥಬೀದಿ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ರಾಜಶೇಖರ್ ಹೆಬ್ಬಾರ್, ವಿಶ್ವವಿದ್ಯಾಲಯ ಕಾಲೇಜು ಎನ್ಎಸ್ಎಸ್ ಸಹ ಸಂಯೋಜಕಿ ನಾಗರತ್ನಾ ಇದ್ದರು.

ವಿವಿ ಕಾಲೇಜು ಸಂಸ್ಥಾಪನಾ ದಿನ
ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ವಿಶ್ವವಿದ್ಯಾಲಯ ಕಾಲೇಜಿನ 152 ನೇ ಸಂಸ್ಥಾಪನಾ ದಿನಾಚರಣೆಯನ್ನು ಶನಿವಾರ (ಇದೇ 19) ಬೆಳಿಗ್ಗೆ 10.30ಕ್ಕೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ.

ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಚಿನ್ನಪ್ಪ ಗೌಡ ಮುಖ್ಯ ಅತಿಥಿಯಾಗಿದ್ದು, ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಕೆ.ರಾಜು ಮೊಗವೀರ, ವಿಶ್ವವಿದ್ಯಾಲಯ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ ಭಾಗವಹಿಸುವರು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಉದಯಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.