ಶನಿವಾರ, ಜೂನ್ 6, 2020
27 °C

ಕೋವಿಡ್-19 ಸೋಂಕಿನಿಂದ ಐವರು ಗುಣಮುಖ: ಚಪ್ಪಾಳೆಯೊಂದಿಗೆ ರೋಗಿಗಳ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದ ಐವರನ್ನು ಶನಿವಾರ ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಈ ಪೈಕಿ ದೃಷ್ಟಿ ಕಳೆದುಕೊಂಡಿರುವ ಇಬ್ಬರು ಹಿರಿಯ ನಾಗರಿಕರೂ ಸೇರಿದ್ದಾರೆ.

ಜಿಲ್ಲಾ ಕೋವಿಡ್-19 ವಿಶೇಷ ಆಸ್ಪತ್ರೆಯಾಗಿರುವ ವೆನ್ಲಾಕ್ ಆಸ್ಪತ್ರೆಯಲ್ಲಿ ಈ ರೋಗಿಗಳು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸಂಪೂರ್ಣ ಗುಣಮುಖರಾಗಿರುವ ಇವರನ್ನು ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಬ್ಲಾಕ್ ಮುಂಭಾಗದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೀಳ್ಕೊಡಲಾಯಿತು.

ಆಂಬುಲೆನ್ಸ್ ಹತ್ತಿ ಮನೆಯತ್ತ ಹೊರಟ ಐವರನ್ನು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ.ಸದಾಶಿವ ಮತ್ತು ಇತರ ವೈದ್ಯರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು