ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ.

ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿತ್ತು.

ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದುಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರವೀಣ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.

ಪುತ್ತೂರು, ಸುಳ್ಯ, ನಿ಼ಷೇಧಾಜ್ಞೆ ಜಾರಿ

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ

ಇವನ್ನೂ ಓದಿ..

ಬೆಳ್ಳಾರೆ: ಬಿಜೆಪಿ ಮುಖಂಡನ ಕೊಲೆ

ಪ್ರವೀಣ್ ಕೊಲೆಯನ್ನು ಸರ್ಕಾರಗಂಭೀರವಾಗಿ ಪರಿಗಣಿಸಿದೆ: ಸಚಿವ ಸುನೀಲ್ ಕುಮಾರ್

ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ

ಹಿಂಸೆಗೆ ಧರ್ಮವಿಲ್ಲ, ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.