ಶನಿವಾರ, ಜೂನ್ 6, 2020
27 °C

ಕೋಸ್ಟಲ್‌ವುಡ್ ಕಲಾವಿದರ ಒಕ್ಕೂಟಕ್ಕೆ ಸಹಾಯಹಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟಕ್ಕೆ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ‘ಲಾಕ್‌ಡೌನ್‌ನಿಂದಾಗಿ ಕೋಸ್ಟಲ್‌ವುಡ್ ಕಲಾವಿದರ ದುಡಿಮೆ ನಿಂತಿದೆ. ಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಕಿಟ್ ವಿತರಿಸಲಾಗಿದೆ. ನಮ್ಮ ನಾಡಿನ ಕಲಾವಿದರು ಅಸಹಾಯಕರಾಗಬಾರದು ಎನ್ನುವ ಚಿಂತನೆಯೊಂದಿಗೆ ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಾಂಸ್ಕೃತಿಕ ಒಕ್ಕೂಟದ ಪದಾಧಿಕಾರಿಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಲಾಗಿದೆ’ ಎಂದರು.

ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ವಿಜಯ್‌ಕುಮಾರ್ ಶೆಟ್ಟಿ, ವಸಂತ್ ಜೆ. ಪೂಜಾರಿ, ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ (ರಿ) ಅಧ್ಯಕ್ಷ ಮೋಹನ್ ಕೊಪ್ಪಳ ಕದ್ರಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಧರ್ಮನಗರ, ಸ್ಥಾಪಕಾಧ್ಯಕ್ಷೆ ಅಶ್ವಿನಿ ಕೋಟ್ಯಾನ್, ಕರಾವಳಿ ಡಾನ್ಸ್ ಕಲಾವಿದರ ಯೂನಿಯನ್ ಸ್ಥಾಪಕಾಧ್ಯಕ್ಷ ರಾಜೇಶ್ ಕಣ್ಣೂರು, ಪ್ರಕಾಶ್ ಪಾಂಡೇಶ್ವರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು