ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ಆಹಾರ: ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು ಅಸ್ವಸ್ಥ

Last Updated 7 ಫೆಬ್ರುವರಿ 2023, 5:42 IST
ಅಕ್ಷರ ಗಾತ್ರ

ಮಂಗಳೂರು: ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಸೋಮವಾರ ಅಸ್ವಸ್ಥಗೊಂಡಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ತಿಳಿಸಿದರು.

'ಶಕ್ತಿನಗರದ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯರು ಸೇವಿಸಿದ್ದ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌ನ ನೀರಿನ ಮಾದರಿಗಳನ್ನು ಕೂಡ ಸಂಗ್ರಹಿಸಲಾಗಿತ್ತು, ಅದರ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಹಾರ ಕಲುಷಿತಗೊಳ್ಳಲು ಕಾರಣ ಏನೆಂಬುದು ಪರೀಕ್ಷೆಯ ವರದಿ ಕೈಸೇರಿದ ಬಳಿಕವಷ್ಟೇ ತಿಳಿದು ಬರಲಿದೆ' ಎಂದು ಅವರು ಮಾಹಿತಿ ನೀಡಿದರು.

ಶಕ್ತಿನಗರದಲ್ಲಿ ಹಾಸ್ಟೆಲ್‌ನಲ್ಲಿ ವಾಸವಿದ್ದ ಸಿಟಿ ಕಾಲೇಜ್ ಆಫ್‌ ನರ್ಸಿಂಗ್ ಸಂಸ್ಥೆಯ ವಿದ್ಯಾರ್ಥಿನಿಯರು ಸೋಮವಾರ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಹೊಟ್ಟೆ ನೋವು ವಾಂತಿ ಭೇದಿ ಸಮಸ್ಯೆ ಕಾಣಿಸಿಕೊಳ್ಳಲು ಶುರುವಾಗಿತ್ತು. ಅವರನ್ನು ನಗರದ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು.

ಅನೇಕ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ಹಾಸ್ಟೆಲ್‌ಗೆ ಮರಳಿದ್ದಾರೆ. ಈಗಲೂ ಕೆಲ ವಿದ್ಯಾರ್ಥಿನಿಯರು ಆಸ್ಪತ್ರೆಯಲ್ಲಿ ಇದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸಂಜೆ ಅಥವಾ ನಾಳೆ ಬಹುತೇಕ ಎಲ್ಲ ವಿದ್ಯಾರ್ಥಿನಿಯರೂ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಡಾ.ರಾಜೇಶ್ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT