ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಆಸ್ತಿ: ವೀರೇಂದ್ರ ಹೆಗ್ಗಡೆ

ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆ
Last Updated 29 ನವೆಂಬರ್ 2021, 16:14 IST
ಅಕ್ಷರ ಗಾತ್ರ

ಉಜಿರೆ: ‘ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ 10 ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ಧರ್ಮಸ್ಥಳದ ವತಿಯಿಂದ ಸದಾ ಲೋಕ ಕಲ್ಯಾಣಕ್ಕಾಗಿ ಸತ್ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

‘ಧರ್ಮಸ್ಥಳವು ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ಸದಾ ಜಾಗೃತವಾಗಿರುವ ಪವಿತ್ರ ಕ್ಷೇತ್ರವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್‌ಗಳು, ಕೆರೆಗಳಿಗೆ ಕಾಯಕಲ್ಪ, ಶುದ್ಧ ಕುಡಿಯುವ ನೀರಿನ ಪೂರೈಕೆ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಇತ್ಯಾದಿ ಸೇವಾ ಕಾರ್ಯಗಳು ಸರ್ಕಾರ ಹಾಗೂ ಸರ್ವರಿಂದಲೂ ಮಾನ್ಯತೆ ಹಾಗೂ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ‘ಪಾದಯಾತ್ರೆಯು ಲಕ್ಷದೀಪೋತ್ಸವದ ಅವಿಭಾಜ್ಯ ಅಂಗವಾಗಿದೆ. ಸಜ್ಜನ ಶಕ್ತಿ ಸಾಮೂಹಿಕವಾಗಿ ಜಾಗೃತವಾದಾಗ ಕ್ರಾಂತಿಕಾರಿ ಪರಿವರ್ತನೆ ಸಾಧ್ಯವಾಗುತ್ತದೆ’ ಎಂದರು.

ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಇದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ
ಇದ್ದರು. ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT