ಭಾನುವಾರ, ಜೂಲೈ 5, 2020
28 °C

ಮಂಗಳೂರು ವಿಮಾನ ನಿಲ್ದಾಣ: ವಿದೇಶಿ ಕರೆನ್ಸಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ದುಬೈಗೆ ಹೊರಟಿದ್ದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 10,000 ಅಮೆರಿಕನ್‌ ಡಾಲರ್‌ ಕರೆನ್ಸಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ನಿವಾಸಿಯಾಗಿರುವ ಶಶಾಂಕ್‌ ಬೈಸಾನಿ ಗುಪ್ತ ಭಾನುವಾರ ತಡರಾತ್ರಿ ಸ್ಪೈಸ್‌ ಜೆಟ್‌ ವಿಮಾನದಲ್ಲಿ ದುಬೈಗೆ ಹೊರಟಿದ್ದರು. ರಾತ್ರಿ 12.10ಕ್ಕೆ ಪ್ರಯಾಣಿಕರ ತಪಾಸಣಾ ಘಟಕದಲ್ಲಿ ಅವರನ್ನು ತಪಾಸಣೆ ನಡೆಸಲಾಯಿತು. ಆಗ ಪ್ಯಾಂಟ್‌ ಜೇಬಿನಲ್ಲಿ ಅಡಗಿಸಿಟ್ಟಿದ್ದ 5,100 ಅಮೆರಿಕನ್‌ ಡಾಲರುಗಳಷ್ಟು ವಿದೇಶಿ ಕರೆನ್ಸಿ ಪತ್ತೆಯಾಯಿತು. ನಂತರ ಕೈಯಲ್ಲಿದ್ದ ಚೀಲವನ್ನೂ ತಪಸಾಣೆ ಮಾಡಲಾಯಿತು. ಅದರಲ್ಲಿ 4,900 ಅಮೆರಿಕನ್ ಡಾಲರ್‌ ವಿದೇಶಿ ಕರೆನ್ಸಿ ದೊರಕಿತು ಎಂದು ಸಿಐಎಸ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣವೇ ಈ ಪ್ರಯಾಣಿಕನಿಗೆ ಪ್ರಯಾಣಕ್ಕೆ ಅನುಮತಿ ನಿರಾಕರಿಸಿ, ಆತನನ್ನು ವಶಕ್ಕೆ ಪಡೆಯಲಾಯಿತು. ನಂತರ ಆತನನ್ನು ಕಸ್ಟಮ್ಸ್‌ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಆತನ ವಿಚಾರಣೆ ನಡಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು