ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವು ಪತ್ತೆ

ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ
Last Updated 6 ಡಿಸೆಂಬರ್ 2022, 14:00 IST
ಅಕ್ಷರ ಗಾತ್ರ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಅರಂತೊಟ್ಟು ಬಳಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು, ಕಾಡಿಗೆ ಬಿಡಲಾಗಿದೆ.

ಅರಂತೊಟ್ಟು ದೀಪಕ್ ಮನೆಗೆ ಬಂದ ಸುಮಾರು 5 ಅಡಿ ಉದ್ದದ ಸಾರಿಬಾಳ ಹಾವು ಕೋಳಿಮರಿಯನ್ನು ನುಂಗುತ್ತಿತ್ತು. ಮನೆಯವರು ತಕ್ಷಣವೇ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು ಹಾವಿನ ರಕ್ಷಣೆ ಮಾಡಿದ್ದಾರೆ.

ಸಾರಿಬಳ ಅಥವಾ ಅರಣ್ಯ ಬೆಕ್ಕು ಹಾವು (ಫೋರೆಸ್ಟನ್ಸ್ ಕ್ಯಾಟ್ ಸ್ನೇಕ್‌ ) ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಾಳ. ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ,ಇಲಿ,ಬಾವಲಿ ಇತ್ಯಾದಿ.

ಇವುಗಳಲ್ಲೂ ಎರಡು ಪ್ರಭೇದಗಳಿದ್ದು ಬೂದು ಬಣ್ಣ ಹಾಗೂ ಕಪ್ಪು ಚುಕ್ಕೆ, ಇನ್ನೊಂದು ಪ್ರಭೇದ ಕಪ್ಪು ಚುಕ್ಕೆಗಳೊಂದಿಗೆ, ತಿಳಿಕೆಂಪು, ಕಂದು ಬಣ್ಣವನ್ನು ಹೊಂದಿರುತ್ತದೆ. ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. 11 ವರ್ಷಗಳಿಂದ ಹಾವು ಹಿಡಿಯುತ್ತಿದ್ದು, ತಿಳಿ ಕೆಂಪು ಕಂದು ಬಣ್ಣದ ಸಾರಿಬಳ ಹಾವು ಇದೇ ಮೊದಲ ಬಾರಿ ಕಂಡು ಬಂದಿದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

ವಿಷ ರಹಿತ ಹಾವು ಇದಾಗಿದ್ದರೂ, ಕಟ್ಟ ಹಾವನ್ನು ಹೋಲುವುದರಿಂದ ಜನರು ಕೊಲ್ಲಲು ಮುಂದಾಗುತ್ತಿದ್ದಾರೆ. ಆದರೆ, ಹಾವು ಕಂಡು ಬಂದರೆ ಅವುಗಳನ್ನು ರಕ್ಷಿಸಿ ಎಂದು ಸ್ನೇಕ್ ಅಶೋಕ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT