ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈವಸ್ಥಾನ ಪುನರ್ ನವೀಕರಣಕ್ಕೆ ಶಿಲಾನ್ಯಾಸ

Last Updated 5 ಜನವರಿ 2023, 5:23 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಶ್ರೀ ಬ್ರಹ್ಮ ಮುಗೇರ್ಕಳ ಕೊರಗತನಿಯ ಮತ್ತು ಪರಿವಾರ ದೈವಗಳ ದೈವಸ್ಥಾನದ ನವೀಕರಣಕ್ಕೆ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮಕ್ಕೆ ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಬುಧವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸ್ವಾಮೀಜಿ ‘ತುಳುನಾಡಿನಲ್ಲಿ ದೈವಾರಾಧನೆ ಶ್ರದ್ಧೆ, ಭಕ್ತಿಯಿಂದ ನಡೆಯುತ್ತಿರುವುದು ಒಳ್ಳೆಯ ವಿಚಾರ’ ಎಂದರು.

ಅರ್ಚಕ ಲೋಕೇಶ್ ಶಾಂತಿ, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಶುಭ ಹಾರೈಸಿದರು.

ಅಮ್ಟಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ಸುನಿಲ್ ಕಾಯರ್‌ಮಾರ್, ಸದಸ್ಯೆ ಪೂರ್ಣಿಮಾ, ಎಪಿಎಂಸಿ ಮಾಜಿ ಅಧ್ಯಕ್ಷ ರೋನಾಲ್ಡ್ ಡಿಸೋಜ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ವಿಜಯ್ ವಿಕ್ರಮ್ ರಾಮಕುಂಜ, ಉದಯ ಕುಮಾರ್ ಕಾಂಜಿಲ, ದೇವಪ್ಪ ಕರ್ಕೇರ ನೆಕ್ಕರೆಗುಳಿ, ಹರೀಶ್ ಶೆಟ್ಟಿ ಪಡು, ಜಗದೀಶ್ ನೆತ್ತರಕೆರೆ, ಸಮಿತಿ ಅಧ್ಯಕ್ಷ ವಿಶ್ವನಾಥ ಕೆಂಪುಗುಡ್ಡೆ, ಲೋಕೇಶ್ ಸುವರ್ಣ, ಪ್ರಶಾಂತ್ ಕೆಂಪುಗುಡ್ಡೆ, ದಿನೇಶ್ ಸಾಲಿಯಾನ್ ಇದ್ದರು.

ಉದ್ಯಮಿ ಸೇಸಪ್ಪ ಕೋಟ್ಯಾನ್, ಪತ್ರಕರ್ತ ವೆಂಕಟೇಶ್ ಬಂಟ್ವಾಳ ಇವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT