ಬುಧವಾರ, ಸೆಪ್ಟೆಂಬರ್ 30, 2020
20 °C
ಸ್ವಂತ ಅಕ್ಕನ ಮಗನಿಂದಲೇ ಕೃತ್ಯ

ಮಂಜೇಶ್ವರ: ಒಂದೇ ಕುಟುಂಬದ ನಾಲ್ವರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕನ್ಯಾಲದಲ್ಲಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.

ಸುದಂಬಲ ನಿವಾಸಿ ಉದಯ (40) ಕೃತ್ಯ ಎಸಗಿರುವ ಆರೋಪಿ. ತನ್ನ ತಾಯಿಯ ತಮ್ಮಂದಿರಾದ ಸದಾಶಿವ (54), ವಿಠಲ (52), ಬಾಬು (50) ಮತ್ತು ತಾಯಿಯ ಸಹೋದರಿ ದೇವಕಿ (58) ಅವರನ್ನು ಕೊಲೆ ಮಾಡಿದ್ದಾನೆ. ಕೇರಳ– ಕರ್ನಾಟಕ ಗಡಿಯಲ್ಲಿರುವ ಬಾಯಾರು ಸಮೀಪದ ಕನ್ಯಾಲದಲ್ಲಿ ಸೋಮವಾರ ರಾತ್ರಿ 7.30ರ ಸುಮಾರಿಗೆ ಕೃತ್ಯ ನಡೆದಿದೆ.

ಕುಟುಂಬ ಕಲಹಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದು, ಆರೋಪಿ ಕೊಲೆ ಮಾಡಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಸರಗೋಡು ಡಿವೈಎಸ್‌ಪಿ ಬಾಲಕೃಷ್ಣನ್‌ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಪೊಲೀಸರು, ಆರೋಪಿ ಉದಯನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾನಸಿಕ ಅಸ್ವಸ್ಥ ಎಂಬ ಮಾಹಿತಿಯನ್ನು ಆತನ ಕುಟುಂಬದವರು ಮತ್ತು ಸ್ಥಳೀಯರು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು