ಗುರುವಾರ , ಮಾರ್ಚ್ 30, 2023
31 °C

ಮಂಗಳೂರು: ಕಾರಿಂಜ ಕ್ಷೇತ್ರಕ್ಕೆ ಪಾದರಕ್ಷೆ ಧರಿಸಿ ಪ್ರವೇಶ– ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಕಾರಿಂಜ ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ಪ್ರವೇಶಿಸುವ ಮೂಲಕ ವಿಕೃತಿ ಮೆರೆದ ನಾಲ್ವರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ ಬುಶೇರ್ ರೆಹಮಾನ್, ಇಸ್ಮಾಯಿಲ್ ಅರ್ಹ ಮಾಜ್, ಮಹಮ್ಮದ್ ತಾನಿಶ್, ಮೊಹಮ್ಮದ್ ರಶಾದ್ ಬಂಧಿತ ಆರೋಪಿಗಳು. 

ಕಾರಿನಲ್ಲಿ ಬಂದ ಕಿಡಿಗೇಡಿಗಳು ಕಾರಿಂಜ ದೇವಸ್ಥಾನಕ್ಕೆ ಪಾದರಕ್ಷೆ ಧರಿಸಿಕೊಂಡು ಪ್ರವೇಶಿಸಿದ್ದು, ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ದೇವಸ್ಥಾನ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿತ್ತು. ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌‌‌ ಉಳಿಪ್ಪಾಡಿ ಅವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು