ಭಾನುವಾರ, ಸೆಪ್ಟೆಂಬರ್ 25, 2022
22 °C
ಎಕ್ಸಲೆಂಟ್‌ ಕಾಲೇಜಿನಲ್ಲಿ ಸ್ವಾತಂತ್ರ್ಯದ ಸಂಭ್ರಮ

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ: ಉಮಾನಾಥ ಕೋಟ್ಯಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ಸ್ವಾಂತತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಾವು ಇಂದು ಸ್ವತಂತ್ರವಾಗಿ ಇದ್ದೇವೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಕಲ್ಲಬೆಟ್ಟುನಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಸೋಮವಾರ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವರಕ್ಷೆ ನೀಡಲಾಯಿತು. ಸಂಸ್ಥೆಯಿಂದ ವಿತರಿಸಿದ ಧ್ವಜವನ್ನು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಮ್ಮ ಮನೆಯಲ್ಲಿ ಹಾರಿಸಿ ಕ್ಷಣವನ್ನು ಬಿತ್ತರಿಸಲಾಯಿತು.

ಮಾಜಿ ಸಚಿವ ಅಭಯಚಂದ್ರಜೈನ್,  ತಹಶೀಲ್ದಾರ್ ಸಚ್ಚಿದಾನಂದ ಸತ್ಯಪ್ಪಕುಚನೂರ್, ಪುರಸಭೆಯ ಉಪಾಧ್ಯಕ್ಷೆ ಸುಜಾತಾ ಶಶಿಧರ್, ಸಂಸ್ಥೆಯ ಅಧ್ಯಕ್ಷ ಯುವರಾಜಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್‌ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು