ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಬ: ರೆಫ್ರಿಜರೇಟರ್ ಸ್ಫೋಟ

Published 10 ಜೂನ್ 2024, 4:11 IST
Last Updated 10 ಜೂನ್ 2024, 4:11 IST
ಅಕ್ಷರ ಗಾತ್ರ

ಕಡಬ (ಉಪ್ಪಿನಂಗಡಿ): ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಕಡಬದ ಅಡ್ಡಗದ್ದೆ ನಿವಾಸಿ ಫಾರೂಕ್ ಎಂಬುವರ ಮನೆಯಲ್ಲಿ ಅವಘಡ ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ.

ಫಾರೂಕ್ ಅವರು ಎಪಿಎಂಸಿ ಬಳಿಯಲ್ಲಿ ಬೈಕ್ ಗ್ಯಾರೇಜ್ ಹೊಂದಿದ್ದು, ಅಲ್ಲಿಗೆ ತೆರಳಿದ್ದರು. ಪತ್ನಿ ಮತ್ತು ಮಕ್ಕಳು ಮದುವೆ ಸಮಾರಂಭಕ್ಕೆ ಹೋಗಿದ್ದರು. ಮನೆಯ ಸುತ್ತ ಹೊಗೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಸಂಶಯಗೊಂಡು ಸಮೀಪಕ್ಕೆ ತೆರಳಿ ನೋಡಿದಾಗ ಮನೆಯ ಒಳಗೆ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ. ಬಳಿಕ ಊರವರು ಸೇರಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್‌ ಸರ್ಕಿಟ್‌ನಿಂದ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT