ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ‘ಸತ್ಯ ಪ್ರತಿಪಾದನೆ: ರಾಷ್ಟ್ರಪಿತನ ಸ್ಥಾನ’

Last Updated 2 ಅಕ್ಟೋಬರ್ 2021, 16:36 IST
ಅಕ್ಷರ ಗಾತ್ರ

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಶನಿವಾರ ಆಚರಿಸಲಾಯಿತು.

ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ್ ಎಂ.ಕೆ ಮಾತನಾಡಿ, ‘ಮಹಾತ್ಮ ಗಾಂಧೀಜಿ ನಡೆ, ನುಡಿ ಹಾಗೂ ಸತ್ಯದಿಂದ ರಾಷ್ಟ್ರಪಿತ ಸ್ಥಾನವನ್ನು ಪಡೆದರು. ದೇಶದಲ್ಲಿದ್ದ ಬಡತನದ ಕಾರಣಕ್ಕೆ ತಾನು ಐಶಾರಾಮಿ ಜೀವನ ನಡೆಸದೆ ಜನರ ಮಧ್ಯೆ ಇದ್ದು ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು, ದೇಶಕ್ಕೋಸ್ಕರ ಸ್ವಾತಂತ್ರ್ಯ ಹೋರಾಟ ಮಾಡಿದರು. ಅವರ ಸ್ವಾವಲಂಬಿ ಜೀವನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ನಾವು ಸ್ವಾಲಂಬಿಯಾಗಿದ್ದಲ್ಲಿ, ನಮ್ಮ ಜೀವನದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಿದೆ’ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿಯವರ ಪ್ರಾಮಾಣಿಕತೆಯ ಜೀವನವನ್ನು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ವಿವರಿಸಿದರು. ದೇಶದ ಸೈನಿಕರು ಮತ್ತು ರೈತರಿಗೆ ಸಮಾನವಾದ ಗೌರವವನ್ನು ಶಾಸ್ತ್ರಿಯವರು ನೀಡಿದ್ದರು ಎಂಬುದನ್ನು ನೆನಪಿಸಿದರು. ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಅಧ್ಯಾಪಕರ ತಂಡವು ಭಜನೆಯನ್ನು ನಡೆಸಿಕೊಟ್ಟಿತು.

ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ‘ಗಾಂಧೀಜಿ ರಾಮರಾಜ್ಯದ ಕನಸು ನನಸಾಗಲು ವಿದ್ಯಾರ್ಥಿಗಳು ಅವರ ಪ್ರಾಮಾಣಿಕತೆಯ ದಾರಿಯಲ್ಲಿ ನಡೆದು ದೇಶದ ಋಣ ತೀರಿಸಬೇಕು’ ಎಂದರು.

ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಚಾಲಕಿ ನೀಮಾ ಸಕ್ಸೇನಾ ಇದ್ದರು. ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ. ರಾಜಾರಾಮ್ ರಾವ್ ಸ್ವಾಗತಿಸಿದರು. ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್ ವಂದಿಸಿದರು. ಅಧ್ಯಾಪಕಿ ದೀಪ್ತಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT