ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಸರ್ಕಾರ ಇದೇ ಸೋಮವಾರ (ಸೆ.18) ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಪಾಡು ಮಾಡಿರುವ ಜಿಲ್ಲಾಡಳಿತ, ಅದರ ಬದಲು ಇದೇ 19ರಂದು ರಜೆ ಘೋಷಿಸಿದೆ.
’ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 2022ರ ನ.21ರಂದು ಪ್ರಕಟಿಸಿದ್ದ ಸಾರ್ವತ್ರಿಕ ರಜೆಗಳ ಪಟ್ಟಿಯ ಪ್ರಕಾರ ಗಣೇಶ ಚತುರ್ಥಿಗೆ ಇದೇ 18ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಕರಾವಳಿಯಲ್ಲಿ ವಿಶೇಷವಾಗಿ ದೇವಸ್ಥಾನ, ದೈವಸ್ಥಾನ, ತರವಾಡು ಮನೆಗಳಲ್ಲಿ ಗಣೇಶ ಚತುರ್ಥಿ ಹಬ್ಬ ಆಚರಿಸಲು ಮಂಗಳವಾರದಂದು (ಇದೇ 19) ರಜೆ ಘೋಷಿಸಬೇಕು ಎಂದು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರ ಸಾರ್ವಜನಿಕ ರಜೆಯನ್ನು ರದ್ದು ಮಾಡಿ, ಇದೇ 19ರಂದು ರಜೆ ಘೋಷಣೆ ಮಾಡಲಾಗಿದೆ. ಇದೇ 18 ಅನ್ನು ಕರ್ತವ್ಯದ ದಿನ ಎಂದು ಪರಿಗಣಿಸಲು ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ ಆದೇಶ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.