ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಗಣೇಶೋತ್ಸವದ ಸಡಗರ ಅನಾವರಣಗೊಂಡಿದೆ.
ಬಂಟರ ಯಾನೆ ನಾಡವರ ಮಾತೃ ಸಂಘ, ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.
ಗಣೇಶೋತ್ಸವ ಕಾರ್ಯಕ್ರಮವನ್ನು ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ. ಜೈರಾಜ್ ಬಿ ರೈ ಮತ್ತು ಸೌಮ್ಯಾ ಜೆ ರೈ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದು ತಿಳಿಸಿದರು.
ಮಣಿಪಾಲ ದಶರಥ ನಗರದ ವೈಷ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ. ಹೆಗ್ಡೆ ತೆನೆ ವಿತರಿಸಿದರು. ಶಶಿಧರ ಆಳ್ವ ಧ್ವಜಾರೋಹಣ ನೆರವೇರಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರೂ ಆಗಿರುವ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ. ಶೇಖರ ಶೆಟ್ಟಿ, ಸುಧಾಕರ ಎಸ್. ಪೂಂಜ, ವಸಂತ ಶೆಟ್ಟಿ, ಶರ್ಮಿಳಾ ಎಸ್. ಆಳ್ವ, ಭಾರತಿ ಜಿ. ಶೆಟ್ಟಿ, ಅರುಣಾ ಎಸ್. ಶೆಟ್ಟಿ, ಆಶಾ ಜ್ಯೋತಿ ರೈ ಇದ್ದರು.
ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು. ಮಂಗಳೂರು ತಾಲ್ಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.