ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

41 ಕೆ.ಜಿ. ಗಾಂಜಾ ವಶ: ಇಬ್ಬರ ಬಂಧನ

Last Updated 18 ಜುಲೈ 2019, 3:45 IST
ಅಕ್ಷರ ಗಾತ್ರ

ಮಂಗಳೂರು: ನಗರದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿರುವ ಕಾವೂರು ಠಾಣೆ ಪೊಲೀಸರು, ₹ 12 ಲಕ್ಷ ಮೌಲ್ಯದ 41 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ನೆಕ್ರಾಜೆ ಲಕ್ಷಂಬೀಡು ಕಾಲೋನಿ ನಿವಾಸಿ ಮಹಮ್ಮದ್ ಇಕ್ಬಾಲ್ (34) ಮತ್ತು ಕಾಸರಗೋಡು ಎರಿಯಾಲ್ ಲೈಟ್ ಹೌಸ್ ಬೀಚ್ ರೋಡ್ ನಿವಾಸಿ ಫಜಲ್ ಎ.ಎಂ (30) ಬಂಧಿತ ಆರೋಪಿಗಳು. ಕೇರಳ ನೋಂದಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಮಣಿಪಾಲದ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಕಾವೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಪದವಿನಂಗಡಿಯಿಂದ ಬೋಂದೆಲ್ ಕಡೆಗೆ ಹೋಗುವ ಈಶ್ವರಕಟ್ಟೆ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದುನಗರ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಆರೋಪಿಗಳಿಂದ 41.1 ಕೆ.ಜಿ. ಗಾಂಜಾ, ಸಾಗಾಟ ಮಾಡಲು ಬಳಸಿದ ₹ 50,000 ಮೌಲ್ಯದ ಕಾರು, ಗಾಂಜಾ ತೂಕ ಮಾಡಲು ಬಳಸುವ ತೂಕದ ಯಂತ್ರ, ಎರಡು ಮೊಬೈಲ್‍ ಫೋನ್‌ಗಳು ಸೇರಿದಂತೆ ಒಟ್ಟು ₹ 12,55,260 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್‌ ಕಮಿಷನರ್‌ ಸಂದೀಪ್ ಪಾಟೀಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಹನುಮಂತರಾಯ ಹಾಗೂ ಲಕ್ಷ್ಮೀ ಗಣೇಶ್ ಅವರ ನಿರ್ದೇಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾವೂರು ಠಾಣೆ ಇನ್‌ಸ್ಪೆಕ್ಟರ್‌ ಕೆ.ಆರ್.ನಾಯ್ಕ್, ಸಬ್‌ ಇನ್‌ಸ್ಪೆಕ್ಟರ್‌ ಹರೀಶ್ ಎಚ್.ವಿ., ಪ್ರೊಬೇಷನರಿ ಸಬ್‌ ಇನ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ್, ಹೆಡ್ ಕಾನ್‍ಸ್ಟೆಬಲ್‍ಗಳಾದ ದುರ್ಗಾಪ್ರಸಾದ್ ಶೆಟ್ಟಿ, ಸಂಜೀವ, ಪ್ರಮೋದ್ ಎ.ಎಸ್., ರಾಜಶೇಖರ ಗೌಡ, ಕಾನ್‍ಸ್ಟೆಬಲ್‍ಗಳಾದ ರಶೀದ್ ಶೇಖ್, ಕೇಶವ ಗೌಡ, ವಿನಯ್ ಕುಮಾರ್, ಶ್ರೀಧರ್ ವಿ., ಜೀಪ್‌ ಚಾಲಕ ಇಬ್ರಾಹಿಂ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT