ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಮಾರಾಟ ಆರೋಪ: ದಂಪತಿ ಬಂಧನ

Last Updated 16 ಜುಲೈ 2022, 12:17 IST
ಅಕ್ಷರ ಗಾತ್ರ

ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

ಕಾವೂರು ಕೆ.ಸಿ. ಲೇಔಟ್‌ನ ವಿಖ್ಯಾತ್ (28) ಮತ್ತು ಅಂಜನಾ (21) ಬಂಧಿತರು. ಬಂಧಿತರಿಂದ 2.2 ಕೆ.ಜಿ ತೂಕದ ಒಟ್ಟು ₹ 22 ಸಾವಿರ ಮೌಲ್ಯದ ಗಾಂಜಾ, ₹ 1,500 ನಗದು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿ ಒಟ್ಟು ₹ 92 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ರಾಜೇಂದ್ರ ಬಿ ನೇತೃತ್ವದಲ್ಲಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದರು.

ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಮಾದಕ ವಸ್ತು ಸೇವನೆ ಮಾಡಿದ್ದು ದೃಢಪಟ್ಟಿದೆ. ವಿಖ್ಯಾತ್ ವಿರುದ್ಧ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಪ್‌ಗೆ ಸಂಬಂಧಿಸಿ ಒಟ್ಟು 13 ಪ್ರಕರಣಗಳು ದಾಖಲಾಗಿವೆ. ಅಂಜನಾ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳು ನಗರದ ಎಂ.ಜಿ. ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT