ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಡಿ ಘಾಟ್ 2ನೇ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ: ಸಂಚಾರ ಮತ್ತೆ ಆರಂಭ

Last Updated 5 ಫೆಬ್ರುವರಿ 2021, 9:08 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಎರಡನೇ ತಿರುವಿನಲ್ಲಿ ಟ್ಯಾಂಕರ್ ಮಗುಚಿ ಬಿದ್ದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಅಡುಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಬೆಳಿಗ್ಗೆ 10.30 ರ ವೇಳೆಗೆ ಉರುಳಿ ಬಿದ್ದಿದೆ. ಸದ್ಯ ಸಂಚಾರ ಸ್ಥಗಿತವಾಗಿದ್ದು, ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸಂಚಾರಕ್ಕೆ ಮುಕ್ತ

ಅನಿಲ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ಮೂಲಕ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ಈ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ ಎಂದು ಎಸ್ಪಿ ಲಕ್ಷ್ಮಿಪ್ರಸಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT