ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣನಾಥೇಶ್ವರ ಕಾಲೇಜು: ಗುರು–ಶಿಷ್ಯರ ಸಮ್ಮಿಲನ ನಾಳೆ

Published 16 ಮಾರ್ಚ್ 2024, 2:47 IST
Last Updated 16 ಮಾರ್ಚ್ 2024, 2:47 IST
ಅಕ್ಷರ ಗಾತ್ರ

ಮಂಗಳೂರು:  ಗೋಕರ್ಣನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮಾ.17ರಂದು ಬೆಳಿಗ್ಗೆ 9.30 ರಿಂದ ಸಂಜೆ 4ರವರೆಗೆ ಗುರು ಶಿಷ್ಯರ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.

1982ರಿಂದ 2024ರವರೆಗಿನ 41 ವರ್ಷಗಳ ಅವಧಿಯಲ್ಲಿ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಕಲಿಸಿದ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಒಂದೆಡೆ ಸೇರುವ ಕಾರ್ಯಕ್ರಮ ಇದಾಗಿದೆ.

ಬೆಳಿಗ್ಗೆ 9.30ಕ್ಕೆ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಸಂಚಾಲಕ ವಸಂತ ಕಾರಂದೂರು ಅಧ್ಯಕ್ಷತೆ ವಹಿಸುವರು. ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷರಾದ ಶೇಖರ ಪೂಜಾರಿ, ಬಿ.ಜಿ. ಸುವರ್ಣ, ಕಾಲೇಜಿನ ಪ್ರಾಂಶುಪಾಲೆ ಆಶಾಲತಾ ಸುವರ್ಣ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಮನೋಹರ ಶೆಟ್ಟಿ, ನಂದಗೋಪಾಲ ಶೆಣೈ, ಉದ್ಯಮಿಗಳಾದ ಪ್ರಶಾಂತ್ ಸನಿಲ್, ಹರೀಶ್ ಶೇರಿಗಾರ್, ಚಂದನ್ ದಾಸ್, ಹರೀಶ್, ಜಿತೇಂದ್ರ ಕೊಟ್ಟಾರಿ, ನಿವೃತ್ತ ಪ್ರಾಂಶುಪಾಲ ಶ್ರೀಧರ್ ಮಣಿಯಾಣಿ ಭಾಗವಹಿಸುವರು. ಉಪನ್ಯಾಸಕರು ಬೋಧಕೇತರ ಸಿಬ್ಬಂದಿಯನ್ನು ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT