ದುಬೈನಿಂದ ಸೂಟ್‌ಕೇಸ್‌ನ ತಳಭಾಗದಲ್ಲಿ ₹34 ಲಕ್ಷ ಮೌಲ್ಯದ ಚಿನ್ನ ತಂದವರಿಬ್ಬರ ಸೆರೆ

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.
ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತರು. ಇಬ್ಬರೂ ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಅಧಿಕಾರಿಗಳಾದ ನಾಗೇಶ್ ಕುಮಾರ್, ಮನೋಕಾತ್ಯಾಯಿನಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.