ಮಂಗಳೂರು ವಿಮಾನ ನಿಲ್ದಾಣದಲ್ಲಿ ₹ 20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನವನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.
ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಕಾರ್ಯಾಚರಣೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.