ಮೂಲ್ಕಿ: ಮಂಗಳೂರಿನ ಪಡೀಲ್ನಲ್ಲಿ ಶುಕ್ರವಾರ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆಯಾಗಲಿದ್ದು, ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸರ್ಕಾರಿ ಕಚೇರಿಗಳ ಹಲವು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಶುಕ್ರವಾರ ಕಚೇರಿಯ ಕೆಲಸ ಕಾರ್ಯಗಳು ಸ್ಥಗಿತವಾಗಬಹುದು ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗವಹಿಸುವ ಕಾರ್ಯಕ್ರಮವಾಗಿರುವುದರಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಮೂಲ್ಕಿ ತಾಲ್ಲೂಕಿನ ರಿಜಿಸ್ಟ್ರಾರ್ ಕಚೇರಿ, ಸರ್ವೆ ಇಲಾಖೆ, ತಹಶೀಲ್ದಾರ್ ಕಚೇರಿ ಸಹಿತ ವಿವಿಧ ಇಲಾಖೆ ಕಚೇರಿಗಳ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಬ್ಬರು ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು. ಒಂದು ಗ್ರಾಮ ಪಂಚಾಯಿತಿಯಿಂದ ಕನಿಷ್ಠ 70 ಮಂದಿಯಾದರೂ ಬರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ’ ಎಂದು ತಿಳಿದು ಬಂದಿದೆ.

‘ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ಪ್ರತಿಕ್ರಿಯಿಸಿ, ಪಂಚಾಯಿತಿ ಅಧ್ಯಕ್ಷರ ಹೆಸರನ್ನು ಆಮಂತ್ರಣ ಪತ್ರದಲ್ಲಿ ಹಾಕಿರುವ ಬಗ್ಗೆ ತಿಳಿದಿಲ್ಲ. ಅಧಿಕೃತವಾಗಿ ಆಹ್ವಾನ ನೀಡಿಲ್ಲ. ಪಂಚಾಯಿತಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸರ್ಕಾರಿ ಅಧೀನದ ಸಿಬ್ಬಂದಿಯನ್ನು ಒತ್ತಾಯವಾಗಿ ಕರೆಸಿಕೊಂಡಿರುವುದು ಸರಿಯಲ್ಲ’ ಎಂದಿದ್ದಾರೆ.

‘ಯಾವುದೇ ಸಿಬ್ಬಂದಿಯನ್ನು ಕಾರ್ಯಕ್ರಮಕ್ಕೆ ಕಳುಹಿಸಬಾರದು. ಜನರು ಪಂಚಾಯಿತಿಗೆ ಬರುವಾಗ ಸಿಬ್ಬಂದಿ ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಸಿಬ್ಬಂದಿಯನ್ನು ಈ ರೀತಿ ದುರುಪಯೋಗ ಪಡೆಸಿಕೊಳ್ಳಬಾರದು ಎಂದು ಮುಖ್ಯಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಮೂಲ್ಕಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.